ಭಾರತ, ಮಾರ್ಚ್ 16 -- ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಎದೆ ನೋವಿನಿಂದಾಗಿ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇಸಿಜಿ ಸೇರಿದಂತೆ ಇನ್ನಿತರ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂಡಿಯಾ ಟುಡೇ ವರದಿಯ ಪ್ರಕಾರ, ಸಂಗೀತ ಮಾಂತ್ರಿಕ ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರೆಹಮಾನ್ ಅವರನ್ನು ಬೆಳಿಗ್ಗೆ 7:30 ಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಕೆಲವು ಪರೀಕ್ಷೆಗಳಿಗೆ ಒಳಪಡಿಸಲಾಗಿದೆಯಂತೆ. ಅವರನ್ನು ಆಂಜಿಯೋಗ್ರಾಮ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಧ್ಯಾಹ್ನದ ವೇಳೆಗೆ ಅವರನ್ನು ಡಿಸ್ಚಾರ್ಜ್ ಮಾಡುವ ನಿರೀಕ್ಷೆಯಿದೆ. ಕಳೆದ ತಿಂಗಳು, ಎಆರ್ ರೆಹಮಾನ್ ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಎಡ್ ಶೀರನ್ ಅವರೊಂದಿಗೆ ಕಾರ್ಯಕ್ರಮದಲ್ಲಿ ಭ...