Mandya, ಜೂನ್ 6 -- ಮಂಡ್ಯ: ಬಕ್ರೀದ್‌ ಹಬ್ಬದ ಆಚರಣೆಯ ಸಮಯದಲ್ಲಿ ದೊಡ್ಡ ಪ್ರಾಣಿಗಳಾದ ಗೋವುಗಳು ಹಾಗೂ ಒಂಟೆಗಳನ್ನು ವಧೆ ಮಾಡುವ ಸಾಧ್ಯತೆ ಇರುತ್ತದೆ ದೊಡ್ಡ ಪ್ರಾಣಿಗಳಾದ ಗೋವು ಹಾಗೂ ಒಂಟೆ ವಧೆ ಕಾನೂನು ಬಾಹಿರ ಚಟುವಟಿಕೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ರಾಮನಗರ ಮದ್ದೂರು ಗಡಿ ಭಾಗದಲ್ಲಿ ಹಾಗೂ ನಾಗಮಂಗಲ ಕೆ ಆರ್ ಪೇಟೆ ಗಡಿಭಾಗದಲ್ಲಿ ಅಕ್ರಮ ಪ್ರಾಣಿ ಸಾಗಾಣಿಕೆ ನಡೆಯಬಹುದಾಗಿದ್ದು, ಇದರ ಕುರಿತು ನಿಗಾ ವಹಿಸಿ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಅಗತ್ಯ ಸಿಬಂದಿಗಳನ್ನು ನಿಯೋಜಿಸಿ ತಪಾಸಣೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು ದೊಡ್ಡ ಪ್ರಾಣಿಗಳಾದ ಒಂಟೆ ಹಸು ಇತ್ಯಾದಿ ಪ್ರಾಣಿಗಳ ಬಲಿ ಕೊಡದಿರುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳ...