Bangalore, ಮಾರ್ಚ್ 22 -- Bangalore 2nd Airport: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈಗಾಗಲೇ ವಿಮಾನ ನಿಲ್ದಾಣಕ್ಕೆಂದೇ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏಪ್ರಿಲ್‌ 7ರಿಂದ 9ರೊಳಗೆ ಕರ್ನಾಟಕಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ 1.21ಕೋಟಿ ರೂ.ಶುಲ್ಕವನ್ನು ಪಾವತಿಸಲಾಗಿದೆ . ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಈ ಸಲುವಾಗಿ ಗುರುತಿಸಲಾಗಿದೆ.

ಭವಿಷ್ಯದ ಬೆಂಗಳೂರು ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಎರಡನೇ ವಿಮಾನ ನಿಲ್ದಾಣಕ್ಕೆ ಪೂರಕವಾಗಿ ಸ್ಥಳ ಗುರುತಿಸಿ ಅಂತಿಮಗೊಳಿಸಿವುದು, ಅದಕ್ಕೆ ಬೇಕಾದ ಅನುಮತಿಗಳನ್ನು ಪಡೆದುಕೊಂಡು ನಿಗದಿತ ಅವಧಿಯೊಳಗೆ ನಿಲ್...