Bangalore, ಏಪ್ರಿಲ್ 8 -- Bangalore 2nd Airport: ಒಂದು ಕಡೆ ಬೆಂಗಳೂರಿನ ಆಸುಪಾಸಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಪ್ರಯತ್ನಗಳು ಬಿರುಸಿನಿಂದ ಸಾಗುತ್ತಿದ್ದರೆ ಶಿರಾ ಶಾಸಕ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿಬಿ ಜಯಚಂದ್ರ ಅವರು ತುಮಕೂರು ಜಿಲ್ಲೆಯ ಶಿರಾ ಸಮೀಪವೇ ವಿಮಾನ ನಿಲ್ದಾಣ ಸ್ಥಾಪನೆಗೆ ಪ್ರಯತ್ನ ಮಾಡುವುದನ್ನು ಕೈಬಿಟ್ಟಿಲ್ಲ. ಶಿರಾ ತುಮಕೂರಿನಿಂದ 120 ಕಿಮೀ ದೂರದಲ್ಲಿದೆ. ಶಿರಾದಲ್ಲಿಯೇ ವಿಮಾನ ನಿಲ್ದಾಣ ಸ್ಥಾಪನೆ ಆಗಬೇಕು ಎಂದು ಸುಮಾರು 44 ಶಾಸಕರು ಸಹಿ ಹಾಕಿರುವ ಮನವಿ ಪತ್ರವನ್ನು ಜಯಚಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಈಗಾಗಲೇ ನಗರದ ಸಮೀಪ ಎರಡನೇ ವಿಮಾನ ನಿಲ್ದಾಣಕ್ಕೆ ಸೂಕ್ತ ಸ್ಥಳ ಗುರುತಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಅಧಿಕಾರಿಗಳ ತಂಡ ಬೆಂಗಳೂರಿಗೆ ಆಗಮಿಸಿದೆ.

ರಾಜ್ಯ ಸರ್ಕಾರ ಗುರುತಿಸಿರುವ ಕನಕಪುರ ರಸ್ತೆಯ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯ ಒಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದೆ. ಈ ತಂಡವು ಮೂಲ...