Bangalore, ಏಪ್ರಿಲ್ 6 -- Bangalore Crime: ಬ್ಯಾಡ್ಮಿಂಟನ್ ತರಬೇತಿಗೆ ಆಗಮಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ನಗ್ನ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದ ತರಬೇತುದಾರನನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ತಮಿಳುನಾಡಿನ ಸುರೇಶ್ ಬಾಲಾಜಿ ಆರೋಪಿ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ, ಆರೋಪಿಯ ವಿರುದ್ಧ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಈತನ ಮೊಬೈಲ್‌ ವಶಪಡಿಸಿಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಅತ್ಯಾಚಾರಕ್ಕೆ ಒಳಗಾದ 16 ವರ್ಷದ ಬಾಲಕಿ ಸೇರಿದಂತೆ ಎಂಟು ಬಾಲಕಿಯರ ನಗ್ನ ಫೋಟೊಗಳು ಹಾಗೂ ವಿಡಿಯೊಗಳು ಮೊಬೈಲ್‌ ನಲ್ಲಿ ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಹಲವು ವರ್ಷಗಳಿಂದ ಬ್ಯಾಡ್ಮಿಂಟನ್‌ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದ. ಆತ ಕೆಲಸ ಮಾಡುತ್ತಿದ್ದ ಕೋಚಿಂಗ್‌ ಕೇಂದ್ರಕ್ಕೆ ಎರಡು ವ...