Bangalore, ಫೆಬ್ರವರಿ 25 -- Bangalore IMA Scam: ಬೆಂಗಳೂರಿನಲ್ಲಿ ಮೂರು ವರ್ಷದ ಹಿಂದೆ ಭಾರೀ ಸದ್ದು ಮಾಡಿ ಮಧ್ಯಮ ವರ್ಗದವರ ಕೋಟ್ಯಂತರ ರೂ. ಹಣ ವಂಚನೆಗೆ ದಾರಿಯಾಗಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.

ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕ...