Bangalore, ಜನವರಿ 28 -- ಕರಗ ಬೆಂಗಳೂರಿನ ಜಾನಪದ ಹಬ್ಬ. ಇಲ್ಲಿನ ಪುರಾತನ ಸಮುದಾಯಗಳಲ್ಲಿ ಒಂದಾದ ತಿಗಳ ಅಥವಾ ವಹ್ನಿಕುಲ ಸಮುದಾಯ ಕರಗವನ್ನು ಆಚರಿಸಿಕೊಂಡು ಬರುತ್ತಿದೆ. ಇವರು ದ್ರೌಪದಿ ಮತ್ತು ಪಾಂಡವರ ಅಗ್ರಜ ಧರ್ಮರಾಯನನ್ನು ಪೂಜಿಸಿಕೊಂಡು ಬರುತ್ತಿದ್ದಾರೆ. ದ್ರೌಪದಿಯನ್ನು ತಮ್ಮ ಕುಲ ದೇವತೆ ಎಂದೂ ಭಾವಿಸಿರುವ ತಿಗಳ ಸಮುದಾಯ 800 ವರ್ಷಗಳ ಹಿಂದೆ ತಿಗಳರು ಧರ್ಮರಾಯಸ್ವಾಮಿ ದೇವಸ್ಥಾನವನ್ನು ನಿರ್ಮಿಸಿದೆ.

ಆದಿಶಕ್ತಿ ದ್ರೌಪದಿಯನ್ನು ಆರಾಧಿಸುವ ಹಬ್ಬವೇ ಕರಗ. ಶತಮಾನಗಳಿಂದ ಕರಗವನ್ನು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಆಚರಣೆಯ ಗುಟ್ಟುಗಳು ಅರ್ಚಕರನ್ನು ಹೊರತುಪಡಿಸಿ ಬೇರೆ ಯಾರಿಗೂ ತಿಳಿದಿರುವುದಿಲ್ಲ. ಪೂಜಾ ವಿಧಾನಗಳನ್ನು ಬಹಿರಂಗಪಡಿಸಿದರೆ ತಿಳಿದವರಿಗೆ ಮತ್ತು ತಿಗಳ ಸಮುದಾಯಕ್ಕೆ ಶ್ರೇಯಸ್ಸು ಅಲ್ಲ ಎಂಬ ಪ್ರತೀತಿ ಇದೆ. ಈ ಸಂಪ್ರದಾಯ ಮತ್ತು ಪೂಜೆಯನ್ನು ಬೆಂಗಳೂರು ಮೂಲದ ತಿಗಳರೇ ನಡೆಸುವುದು ವಾಡಿಕೆ. ಇವರ ಮೂಲಪುರುಷ ರಾಜ ವೀರವಹ್ನಿ ಬೆಂಕಿಯಿಂದ ಜನಿಸಿದ ಎಂದು ಹೇಳಲಾಗುತ್ತಿದೆ. ಹೀ...