Bangalore, ಮಾರ್ಚ್ 14 -- Bangalore News: ಚಾಮರಾಜಪೇಟೆಯ ಆನಂದಪುರದ ಮಾರುಕಟ್ಟೆ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ನೀರು ಹಿಡಿಯಲು ಹೋದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ಪಪಿದ್ದಾರೆ. 24 ವರ್ಷದ ಸೆಲ್ವಿ ಮೃತ ಮಹಿಳೆ. ಮೋಟಾರ್ ಗೆ ಅಳವಡಿಸಿದ್ದ ವೈರ್ ತಗುಲಿ ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಮಾರುಕಟ್ಟೆ ರಸ್ತೆಯಲ್ಲಿ ಬಿಬಿಎಂಪಿ ಅವ್ಯವಸ್ಥೆ ವಿರುದ್ಧ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಪರಿಣಾಮ ಮೈಸೂರು ರಸ್ತೆಯಲ್ಲಿ ಕೆಲ ಹೊತ್ತು ಸಂಚಾರ ದಟ್ಟಣೆ ಸಮಸ್ಯೆ ಉಂಟಾಗಿತ್ತು. ಇಲ್ಲಿ ಹೆಚ್ಚಾಗಿ ಹಿಂದೂಗಳು ವಾಸ ಮಾಡುತ್ತಿದ್ದಾರೆ. ಪಕ್ಕದಲ್ಲಿರುವ ಟಿಪ್ಪು ನಗರದಲ್ಲಿ ಹೆಚ್ಚಾಗಿ ಮುಸ್ಲಿಮರಿದ್ದಾರೆ. ಅಲ್ಲಿ ಮನೆ ಮನೆಗೂ ನೀರಿನ ಸಂಪರ್ಕ ಇದೆ. ನಾವು ಕೇಳಿದರೆ ಇದು ಸ್ಲಂ ಎಂದು ಸಬೂಬು ಹೇಳುತ್ತಾರೆ. ನಾವು ವೋಟ್ ಹಾಕಿದ್ದೇವೆ. ಇಲ್ಲಿ ನೀರು, ಚರಂಡಿ ವ್ಯವಸ್ಥೆ ಇಲ್ಲ. ಕುಡಿಯುವ ನೀರಿಗಾಗಿ ಪರದಾಡಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರವನ್...