Bangalore, ಫೆಬ್ರವರಿ 13 -- Bangalore News: ಬೆಲೆ ಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಯುವತಿಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಸಂಬಂಧ ಮುನಿರತ್ನ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಪ್ರಕಣ ಕುರಿತು ಸಾಕಷ್ಟು ವಾದ ವಿವಾದಗಳು ಕೇಳಿ ಬಂದಿದ್ದವು. ಈ ಭೂಮಿಯನ್ನು ವಶಪಡಿಸಿಕೊಳ್ಳಲು ಶಾಸಕ ಮುನಿರತ್ನ ಏಕಾಏಕಿ ಜೆಸಿಬಿಗಳನ್ನು ಕರೆಸಿ ಶೆಡ್‌ ಗಳನ್ನು ಧ್ವಂಸಗೊಳಿಸಿದ್ದಾರೆ ಎಂಬ ಆ...