Bangalore, ಏಪ್ರಿಲ್ 23 -- ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 8 ವಿಭಾಗಗಳ ವ್ಯಾಪ್ತಿಯ 5 ಲೋಕಸಭಾ ಕ್ಷೇತ್ರಗಳ (ಒಟ್ಟು 28 ವಿಧಾನಸಭಾ ಕ್ಷೇತ್ರಗಳು) ವ್ಯಾಪ್ತಿಯಲ್ಲಿ ಸುಗಮವಾಗಿ ಸಾರ್ವಜನಿಕರು ತಮ್ಮ ಮತ ಚಲಾವಣೆ ಮಾಡಲು ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 5 ಲೋಕಸಭಾ ಕ್ಷೇತ್ರಗಳಲ್ಲಿ 1737 ಸೂಕ್ಷ್ಮ ಮತಗಟ್ಟೆಗಳು ಮತ್ತು 6351 ಸಾಮಾನ್ಯ ಮತಗಟ್ಟೆಗಳು ಸೇರಿ 8088 ಒಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಘಟಕದಿಂದ ಚುನಾವಣಾ ಕರ್ತವ್ಯಗಳಿಗೆ 9397 ಅಧಿಕಾರಿ ಮತ್ತು ಸಿಬ್ಬಂದಿಗಳು, 3919 ಗೃಹ ರಕ್ಷಕ ಸಿಬ್ಬಂದಿ, 54 ಸಶಸ್ತ್ರ ತುಕಡಿಗಳು ಹಾಗೂ 11 ಕೇಂದ್ರಿಯ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಬೆಂಗಳೂರು ನಗರದ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಕೇಂದ್ರಿಯ ಭದ್ರತಾ ಪಡೆಗಳೊಂದಿಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ಲಾಗ್ ಮಾರ್ಚ್ ನಡೆಸಲಾಗಿದೆ. 8 ವಿಭಾಗಗಳ ವ್ಯಾಪ್ತಿಯಲ್ಲಿ ...