Bangalore, ಫೆಬ್ರವರಿ 23 -- Bangalore News: ರಸ್ತೆ ಬದಿಗಳಲ್ಲಿ ನಿಂತಿರುತ್ತಿದ್ದ ಕಾರುಗಳ ಚಕ್ರಗಳನ್ನು ಕಳವು ಮಾಡುತ್ತಿದ್ದ ಓರ್ವ ಕಾಲೇಜು ವಿದ್ಯಾರ್ಥಿ ಸೇರಿದಂತೆ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿ ಪ್ರೇಮ್‌ ಕುಮಾರ್‌, ಹೋಟೆಲ್‌ವೊಂದರಲ್ಲಿ ಕಾರ್ಮಿಕನಾಗಿರುವ ಪ್ರೀತಮ್‌ ಮತ್ತು ಮೆಕಾನಿಕ್‌ ಸಯದ್‌ ಸಲ್ಮಾನ್‌ ಬಂಧಿತ ಆರೋಪಿಗಳು. ಆರೋಪಿಗಳು ಬೆಂಗಳೂರು ದಕ್ಷಿಣ ಭಾಗದ ಕಾರುಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದರು. ಜಯನಗರ ಬಿಡಿಎ ಕಾಂಪ್ಲೆಕ್ಸ್‌ ನಲ್ಲಿ ಕಾರನ್ನು ನಿಲ್ಲಿಸಿದ್ದಾಗ ಕಾರಿನ ಚಕ್ರಗಳನ್ನು ಕಳವು ಮಾಡಲಾಗಿದೆ ಎಂದು ವ್ಯಾಪಾರಿಯೊಬ್ಬರು ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಪೊಲೀಸರು ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಕೊಟ್ಟ ಮಾಹಿತಿ ಮೇರೆಗೆ ಅವರು ಇತ್ತೀಚಿನ ತಿಂಗಳುಗಳಲ್ಲಿ 7 ಚಕ್ರಗಳು, 18 ಟೈರ್ ಗಳು ಮತ್ತು 4 ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಜೆ.ಸಿ. ರ...