Bangalore, ಮಾರ್ಚ್ 10 -- Bangalore News: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಡಿಎಂ ಕನ್ಸಲ್ಟೆನ್ಸಿ ವ್ಯವಸ್ಥಾಪಕ ನಿರ್ದೆಶಕ ಚೇತನ್ ಸೇರಿದಂತೆ ಐವರ ವಿರುದ್ಧ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ವ್ಯವಸ್ಥಾಪಕ ನಿರ್ದೇಶಕ ಚೇತನ್, ವ್ಯವಸ್ಥಾಪಕ ಶರತ್, ರೋಡ್ರಿಕ್ಸ್ ನವೀನ್, ಅಂಜಲಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದುಬೈನಲ್ಲಿ ಡಿ.ಎಂ. ಕನ್ಸಲ್ವೆಂಟ್ನ ಕೇಂದ್ರ ಕಚೇರಿ ಇದ್ದು, ದೆಹಲಿ, ಹೈದರಾಬಾದ್, ಬೆಂಗಳೂರಿನಲ್ಲಿ ಕಂಪನಿಯ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪೋಲೆಂಡ್ ಸೇರಿದಂತೆ ವಿವಿಧ ದೇಶಗಳಲ್ಲಿ ವಾಹನ ಚಾಲಕ, ಹೌಸ್ಕೀಪಿಂಗ್ ಸೇರಿದಂತೆ ವಿವಿಧ ಕೆಲಸ ಕೊಡಿಸುವ ಭರವಸೆ ನೀಡಿ ನಿರುದ್ಯೋಗಿಗಳಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದಾರೆ. ಆರು ತಿಂಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಎರಡು ವರ್ಷ ಕಳೆದರೂ ಉ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.