Bangalore, ಮಾರ್ಚ್ 30 -- ಬೆಂಗಳೂರು: ಬೆಂಗಳೂರು ಮತ್ತು ಕೋಲಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಯೊಂದು 44.83 ಕೋಟಿ ರೂ. ಗಳಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಂಚಿಸಿರುವುದನ್ನು ವಾಣಿಜ್ಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮುಖ್ಯಸ್ಥರೊಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಕೋಲಾರದಲ್ಲಿ ಕಾರ್ಖಾನೆ ಮತ್ತು ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ಲಾರಾಗಾ ಮೆಟಲ್ಸ್ ಪ್ರೈವೇಟ್ ಲಿಮಿಟೆಡ್ ಜಿಎಸ್‌ಟಿ ವಂಚಿಸಿರುವ ಕಂಪನಿ ಎಂದು ತಿಳಿದು ಬಂದಿದೆ. ಈ ಕಂಪನಿಯು ನಕಲಿ ಇನ್‌ ವಾಯ್ಸ್ ಗಳು ಮತ್ತು ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ, ಹೂಡುವಳಿ ತೆರಿಗೆ ಜಮೆ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ಅನ್ನು ಕ್ಲೇಮು ಮಾಡಿದೆ. ಕಂಪನಿಯ ಕಚೇರಿ ಮೇಲೆ ಇತ್ತೀಚೆಗೆ ದಾಳಿ ನಡೆಸಿ, ಲೆಕ್ಕಪತ್ರಗಳನ್ನು ಪರಿಶೀಲಿಸಿದಾಗ ಈ ವಂಚನೆ ಪತ್ತೆಯಾಗಿದೆ ಎಂದು ತೆರಿಗೆ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

ಕಂಪನಿಯ ಪ್ರವರ್ತಕರಾದ ಘನಶ್ಯಾಮ್ ಅಗರ್‌ವಾಲ್ ಮತ್ತ...