Bangalore, ಫೆಬ್ರವರಿ 28 -- Bangalore Power Cut: 220/66/11 ಕೆವಿ ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ 2025ರ ಮಾರ್ಚ್‌ 2 ರ ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ವೇಳೆ ಬೆಂಗಳೂರು ನಗರದ ವಿವಿಧ ಬಡಾವಣೆಯ ಗ್ರಾಹಕರು ಸಹಕಾರ ನೀಡುವಂತೆ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮವು ಮನವಿ ಮಾಡಿಕೊಂಡಿದೆ. ಗೃಹಲಕ್ಷ್ಮಿ ಅಪಾರ್ಟ್ ಮೆಂಟ್, ಎಸ್ ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇ ಔಟ್, ಕೆಂಪಯ್ಯ ಲೇ ಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್ ಟಿಟಿಎಫ್ ಸರ್ಕಲ್, ಗಣಪತಿ ನಗರ ಮುಖ್ಯ ರಸ್ತೆ, ಪೋಲಿಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥೀಯೇಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸರ್ಕಲ್ ರಸ್ತೆ, ಬೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇ ಔಟ್, ಎಫ್ ...