ಭಾರತ, ಜೂನ್ 4 -- ಬೆಂಗಳೂರು: ಮೊದಲ ಬಾರಿಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಸ್‌ ಕ್ರಿಕೆಟ್‌ನಲ್ಲಿ ಗೆದ್ದ ಸಂಭ್ರಮ ಆಚರಣೆ ಬೆಂಗಳೂರಿನಲ್ಲಿ ಸಾವಿನ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ( Bangalore Stampede) ಹನ್ನೊಂದು ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು. ಅಭಿಮಾನಿಗಳನ್ನು ತಡೆಯಲು ಪೊಲೀಸರು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ.ಚಿನ್ನಸ್ವಾಮಿ ಕ್ರೀಡಾಂಗಣದ ಒಳ ಹೋಗುವ ವೇಳೆ ಈ ಘಟನೆ ನಡೆದಿದ್ದು ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತದ ವೇಳೆ ಹನ್ನೊಂದು ಮಮದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಂಜೆ ಕಾರ್ಯಕ್ರಮ ಆರಂಭವಾಗಿದ್ದು, ಪಾಸ್‌ ಇದ್ದವರಿಗೆ ಮಾತ್ರ ಒಳಕ್ಕೆ ಬಿಡಲಾಗುತ್ತಿದೆ. ಪಾಸ್‌ ಇಲ್ಲದೇ ಸಹಸ್ರಾರು ಸಂಖ್ಯೆಯಲ್ಲಿ ಕ್ರಿಕೆಟ್‌ ಅಭಿಮಾನಿಗಳು ಕ್ರೀಡಾಂಗಣ ಬಳಿ ಜಮಾಯಿಸಿ...