Bangalore, ಜನವರಿ 28 -- Bangalore Summer: ರಾಜಧಾನಿ ನಗರಿ ಬೆಂಗಳೂರಿನಲ್ಲಿ ಈ ಬೇಸಿಗೆಯಲ್ಲೂ ನೀರಿನ ಬವಣೆ ಉಂಟಾಗುವ ಆತಂಕ ಎದುರಾಗಿದೆ. ಬೆಂಗಳೂರಿನ ಕೆಲವು ಭಾಗದಲ್ಲಿ ಒಂದಷ್ಟು ನೀರಿನ ಬವಣೆ ಎದುರಾದರೆ, ಇನ್ನಷ್ಟು ಪ್ರದೇಶಗಳಲ್ಲಿ ಹೆಚ್ಚಿನ ಸಮಸ್ಯೆಯೇ ಎದುರಾಗಲಿದೆ. ಕಳೆದ ವರ್ಷ ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿ ಬೆಂಗಳೂರಿನ ಹೆಚ್ಚಿನ ಭಾಗಗಳಲ್ಲಿ ನೀರಿನ ಸಮಸ್ಯೆ ತಲೆದೋರಿತ್ತು. ಒಂದು ತಿಂಗಳ ಕಾಲವಂತೂ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ನೀರು ಸರಬರಾಜಿಗೆ ಇನ್ನಿಲ್ಲದ ಹರಸಾಹಸ ಪಟ್ಟಿದ್ದರು. ಈ ಬಾರಿಯೂ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿತ ಕಂಡಿರುವ ಕೆಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಎದುರಾಗಲಿದ್ದು, ಜನತೆ ಸಹಕರಿಸಬೇಕು ಎಂದು ಜಲಮಂಡಳಿ ಮನವಿಯನ್ನೂ ಮಾಡಿಕೊಂಡಿದೆ.

ಬೆಂಗಳೂರಿನ ಮಹದೇವಪುರ ಮತ್ತು ವೈಟ್‌ಫೀಲ್ಡ್‌ನಂತಹ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟವು ಗಮನಾರ್ಹವಾಗಿ ಕುಸಿಯುವ ನಿರೀಕ್ಷೆಯಿದ್ದು, ಈ ಬೇಸಿಗೆಯಲ್ಲಿ ಬೆಂಗಳೂರು ಮತ್ತೊಂದು ನೀರಿನ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಯಿದೆ. ...