Mumbai, ಫೆಬ್ರವರಿ 23 -- Bank of Baroda Recruitment 2025: ಭಾರತದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ 4000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಪದವೀಧರರು ಮಾರ್ಚ್ 11 ರೊಳಗೆ ಆನ್‌ಲೈನ್‌ನಲ್ಲಿ ಈ ಹುದ್ದೆಗಳಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ, ಶೈಕ್ಷಣಿಕ ಅರ್ಹತೆ, ಮತ್ತು ಅರ್ಜಿ ಶುಲ್ಕದ ವಿವರಗಳನ್ನು ಬ್ಯಾಂಕ್‌ ಆಫ್‌ ಬರೋಡಾ ಈಗಾಗಲೇ ಹೊರಡಿಸಿರುವ ಅಧಿಸೂಚನೆಯಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮೂಲಕವೇ ನಡೆಯಲಿದೆ. ಆನಂತರ ದಾಖಲೆ ಪರಿಶೀಲನೆಯನ್ನು ಒಳಗೊಂಡಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು ಎಂದು ಬ್ಯಾಂಕ್‌ ಆಫ್‌ ಬರೋಡಾ ತಿಳಿಸಿದೆ.

ಬ್ಯಾಂಕ್ ಆಫ್ ಬರೋಡಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ಪದವಿ ಮುಗಿಸಿದವರು...