Bangalore, ಮಾರ್ಚ್ 27 -- BBMP Budget 2025:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2025-26ನೇ ಸಾಲಿನ ಬಜೆಟ್ ಮಂಡನೆ ಮತ್ತೆ ಮುಂದೂಡಲ್ಪಟ್ಟಿದೆ. ಮಾರ್ಚ್ 27ರ ಗುರುವಾರ ಬೆಳಿಗ್ಗೆ 11ಕ್ಕೆ ಬಜೆಟ್ ಮಂಡನೆಯಾಗಲಿದೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾ‌ರ್ ಗಿರಿನಾಥ್ ತಿಳಿಸಿದ್ದರು. ನಂತರ ಬಜೆಟ್ ಅನ್ನು ಮಾರ್ಚ್ 28ರಂದು ಮಂಡಿಸುವುದಾಗಿ ತಿಳಿಸಲಾಗಿತ್ತು. ಆದರೆ ದಿಢೀರನೆ ಮತ್ತೆ ಬಜೆಟ್ ದಿನವನ್ನು ಮುಂದೂಡಲಾಗಿದ್ದು, ಮಾರ್ಚ್ 29ರ ಶನಿವಾರ ಬೆಳಿಗ್ಗೆ 11ಕ್ಕೆ ಮಂಡನೆಯಾಗುತ್ತದೆ ಎಂದು ತಿಳಿಸಲಾಗಿದೆ. ಪಾಲಿಕೆ ಸದಸ್ಯರಿಲ್ಲದೆ ಸತತ ಐದನೇ ಬಾರಿಗೆ ಅಧಿಕಾರಿಗಳೇ 2025-26ನೇ ಸಾಲಿನ ಪಾಲಿಕೆ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಪ್ರತಿ ಬಾರಿ ಸರಾಸರಿ ಶೇ.5 ರಿಂದ 8ರಷ್ಟು ಏರಿಕೆಯಾಗುತ್ತಿದ್ದ ಪಾಲಿಕೆ ಬಜೆಟ್ ಗಾತ್ರ ಈ ಬಾರಿ ಶೇ.40 ರಷ್ಟು ಏರಿಕೆ ಕಾಣಲಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

2024-25ರಲ್ಲಿ ಬಿಬಿಎಂಪಿ 12,371.63 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿತ್ತು. ರಾಜ್ಯ ಸರ್ಕಾರ 7,000 ಕೋಟಿ ರೂ...