ಭಾರತ, ಮಾರ್ಚ್ 25 -- ಬೆಂಗಳೂರು: ಬಹುನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಮಾರ್ಚ್ 27 ರಂದು ಮಂಡನೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಪುರಪಿತೃಗಳಿಲ್ಲದೇ ಸತತ ಐದನೇ ಬಾರಿಗೆ ಅಧಿಕಾರಿಗಳೇ 2025-26ನೇ ಸಾಲಿನ ಪಾಲಿಕೆ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. 2024-25ನೇ ಸಾಲಿನ ಆರ್ಥಿಕ ವರ್ಷ ಮಾ.31 ರಂದು ಮುಗಿಯಲಿದ್ದು, ಅಷ್ಟರೊಳಗೆ ಪಾಲಿಕೆ ಬಜೆಟ್‌ಗೆ ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆಯಬೇಕಿದೆ. ಪ್ರತಿ ಬಾರಿ ಸರಾಸರಿ ಶೇ.5 ರಿಂದ 8ರಷ್ಟು ಏರಿಕೆಯಾಗುತ್ತಿದ್ದ ಪಾಲಿಕೆ ಬಜೆಟ್ ಗಾತ್ರ ಈ ಬಾರಿ ಶೇ.40 ರ ಗಡಿ ದಾಟಲಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಕಳೆದ ವರ್ಷ 2024-25ರಲ್ಲಿ ಬಿಬಿಎಂಪಿ 12,371.63 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿತ್ತು. (ಬಜೆಟ್ ಗಾತ್ರವನ್ನು 13,114 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿತ್ತು). ಪ್ರಸಕ್ತ ಸಾಲಿನಲ್ಲಿ ಬಜೆಟ್ ಗಾತ್ರ 18 ಸಾವಿರ ಕೋಟಿ ರೂ. ದಾಟಲಿದೆ. ಈ ವರ್ಷದ ಬಜೆಟ್ ನಲ್ಲಿ ಸುಗಮ ಸಂಚಾರ, ಸ್ವಚ್ಛತೆ, ಹಸಿರೀಕರಣ, ಆರೋಗ್ಯ, ಶಿಕ್ಷಣಕ್ಕೆ...