Bengaluru,ಬೆಂಗಳೂರು, ಮಾರ್ಚ್ 2 -- ಬೆಂಗಳೂರು: ಕುಂದಲಹಳ್ಳಿ ಬ್ರೂಕ್‌ಫೀಲ್ಡ್‌ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಆರೋಪಿಯ ಪತ್ತೆಗಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಆತನ ಚಲನವಲನ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸ್ ತನಿಖೆಯಲ್ಲಿ ಮಹತ್ವದ ಪ್ರಗತಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ನಿನ್ನೆ (ಮಾ.1) ಮಧ್ಯಾಹ್ನ ಸಂಭವಿಸಿದ್ದು, 10 ಜನ ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪ್ರಕರಣದ ಎಲ್ಲ ಆಯಾಮಗಳ ತನಿಖೆ ನಡೆದಿದ್ದು, ಶಂಕಿತ ಆರೋಪಿಯ ಬಂಧನಕ್ಕೆ ಕ್ರಮ ತೆಗೆದುಕೊಂಡಿರುವುದಾಗಿ ಪೊಲೀಸ್ ಇಲಾಖೆ ಹೇಳಿದೆ.

ರಾಮೇಶ್ವರಂ ಕೆಫೆ ಸ್ಫೋಟ ಸಂಭವಿಸಿದ ಕೂಡಲೇ ಅದು ಸಿಲಿಂಡರ್ ಅಥವಾ ಬಾಯ್ಲರ್ ಸ್ಫೋಟ ಆಗಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಸ್ಥಳದಲ್ಲಿ ಸಿಕ್ಕ ಸ್ಫೋಟದ ಚೂರುಗಳ ನಡುವೆ ಬ್ಯಾಟರಿ ಮತ್ತು ಇತರೆ ವಸ್ತುಗಳು ಅದು ಬಾಂಬ್ ಸ್ಫೋಟ ಎಂಬುದರ ಸುಳಿವು ನೀಡಿದ್ದವು. ಇದನ್ನು ಎಫ್‌ಎಸ್‌ಎಲ್ ತಂಡ ಮತ್ತು ...