ಭಾರತ, ಫೆಬ್ರವರಿ 10 -- ಬೆಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಕಟವಾಗಿದ್ದ ಜಾಹೀರಾತು ನಂಬಿ ಖಾಸಗಿ ಕಂಪನಿಯ ನಿವೃತ್ತ ಅಧಿಕಾರಿಯೊಬ್ಬರು 5.67 ಕೋಟಿ ರೂ. ಹೂಡಿಕೆ ಮಾಡಿ ಸೈಬರ್‌ ವಂಚನೆಯ ಜಾಲಕ್ಕೆ ಒಳಗಾಗಿದ್ದಾರೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಾನವ ಸಂಪನ್ಮೂಲ ಅಧಿಕಾರಿ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಆರೋಪಿಗಳಾದ ವೀರೇಶ್ ಗುಪ್ತಾ, ಆಯಾನ್ ಜೋಸೆಫ್ ವಿರುದ್ಧ ಬೆಂಗಳೂರಿನ ಸೆನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾಗಿರಿ ಲೇಔಟ್ ನಿವಾಸಿಯಾಗಿರುವ ಈ ಸಂತ್ರಸ್ತ ಮಹಿಳೆ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಉದ್ದೇಶದಿಂದ ಡಿಮ್ಯಾಟ್ ಖಾತೆ ತೆರೆದಿದ್ದರು. ಫೇಸ್‌ಬುಕ್‌ನಲ್ಲಿ ಪ್ರಕಟವಾದ ಷೇರು ಮಾರುಕಟ್ಟೆ ಕುರಿತ ಲಿಂಕ್ ಒಂದನ್ನು ಕ್ಲಿಕ್ ಮಾಡಿದಾಗ, ವಿರೇಶ್ ಗುಪ್ತಾ ಎಂಬಾತನ ಮೊಬೈಲ್ ನಂಬರ್ ಕಾಣಿಸಿಕೊಂಡಿದೆ. ಸ್ವಲ್ಪ ಸಮಯದ ನಂತರ ವಿರೇಶ್ ಎರಡು ಪ್ರತ್ಯೇಕ ನಂಬರ್‌ಗಳಿಂದ ಸಂದೇಶ ಕಳುಹಿಸಿ, ಆದಿತ್ಯಾ ಬಿರ್ಲಾ ಮತ್ತು ಸ್...