ಭಾರತ, ಫೆಬ್ರವರಿ 9 -- ಬೆಂಗಳೂರು: ನಗರದ ಸುಮಾರು 400 ರೌಡಿಗಳು ಹಾಗೂ ಹಳೆಯ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, 11 ಮಂದಿ ರೌಡಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅಡಾವತ್ ಅವರ ನೇತೃತ್ವದಲ್ಲಿ ಎಸಿಪಿಗಳು, ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಶುಕ್ರವಾರ (ಫೆ.7) ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ದಾಳಿ ನಡೆಸಿದ್ದಾರೆ. ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದ 15 ಮಂದಿ ರೌಡಿಗಳನ್ನು ವಶಕ್ಕೆ ಪಡೆದು ಬಳಿಕ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ.

ದಾಳಿ ನಡೆಸಿದ ಸಂದರ್ಭದಲ್ಲಿ ಕೆಲವು ರೌಡಿಗಳ ಮನೆಗಳಲ್ಲಿ ಕೆಲವು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರೌಡಿಗಳು ಮಾಡುತ್ತಿರುವ ಉದ್ಯೋಗ ಮತ್ತು ಮೊಬೈಲ್ ನಂಬರ್‌ಗಳನ್ನು ನಮೂದಿಸಿಕೊಂಡ ಪೊಲೀಸ್ ಅಧಿಕಾರಿಗಳು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

ವಿದೇಶಿ ವಿದ್ಯಾರ್ಥಿಗಳ ಮೇ...