ಭಾರತ, ಮಾರ್ಚ್ 20 -- Bengaluru Metro: ನಮ್ಮ ಮೆಟ್ರೊ ಪ್ರಯಾಣ ದರ ಹೆಚ್ಚಳ ನಂತರ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು, ಬಿಎಂಆರ್‌ ಸಿಎಲ್‌ ಗೆ ನಷ್ಟದ ಭೀತಿ ಎದುರಾಗಿದೆ. ಈ ನಷ್ಟವನ್ನು ಸರಿದೂಗಿಸಿಕೊಳ್ಳಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ದೆಹಲಿ ಮೆಟ್ರೋ ಮಾದರಿಯಲ್ಲಿ ಸರಕು ಸಾಗಣೆ, ಇ ಲಾಜಿಸ್ಟಿಕ್ಸ್‌, ಕೊರೊಯರ್‌ ಸೇವೆ ಆರಂಭಿಸಲು ಚಿಂತನೆ ನಡೆಸಿದೆ. ಇಂತಹ ಸಾಧ್ಯತೆಗಳನ್ನು ನಮ್ಮ ಮೆಟ್ರೊದಲ್ಲೂ ಜಾರಿಗೊಳಿಸಲು ಸಾಧಕಭಾದಕಗಳನ್ನು ಪರಿಶೀಲಿಸಲಾಗುತ್ತಿದೆ. ಇದುವರೆಗೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಮೆಟ್ರೋ ಸರಕು ಸಾಗಣೆ ಆರಂಭಿಸಿದಲ್ಲಿ ಬಿಎಂಆರ್‌ಸಿಎಲ್‌ ಕಾರ್ಯವ್ಯಾಪ್ತಿ ವಿಸ್ತಾರ ಆಗಲಿದೆ. ಎಷ್ಟು ಪ್ರಮಾಣದ ಸರಕು ಸಾಗಿಸಬಹುದು, ಸರಕಿನ ಸ್ವರೂಪ ಹೇಗಿರಬೇಕು? ಯಾವ ಸಮಯದಲ್ಲಿ ಸಾಗಣೆ ಮಾಡಲು ಸಾಧ್ಯ ಎಂಬ ವಿಷಯಗಳನ್ನು ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಕಚೇರಿಗಳು ಆರಂಭವಾಗುವ ಮತ್ತು ಮುಚ್ಚ...