ಭಾರತ, ಮಾರ್ಚ್ 22 -- ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟು ಹೋಗಿದ್ದು ಬೆಂಗಳೂರು ಜನತೆಗೆ ವರುಣ ತಂಪೆರೆದಿದ್ದಾನೆ. ಕಳೆದ ಕೆಲವು ಗಂಟೆಗಳಿಂದ ಬೆಂಗಳೂರಿನ ಬಹುತೇಕ ಕಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ಗಾಳಿ ಹಾಗೂ ಗುಡುಗು ಕೂಡ ಸೇರಿಕೊಂಡಿದೆ. ಮಳೆಯೊಂದಿಗೆ ಬೆಂಗಳೂರು ನಗರದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಮೊದಲ ಮಳೆಯು ವಿಮಾನ ಸಂಚಾರಕ್ಕೂ ಅಡ್ಡಿ ಉಂಟು ಮಾಡಿದೆ.

ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ವಿಮಾನ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದು, ಕನಿಷ್ಠ 10 ವಿಮಾನಗಳನ್ನು ಚೆನ್ನೈ ಕಡೆಗೆ ತಿರುಗಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ವಿಮಾನಗಳ ವಿಳಂಬ ಮತ್ತು ವಿಮಾನ ಮಾರ್ಗ ಬದಲಾವಣೆಯಾಗಿದ್ದು, ಪ್ರಯಾಣಿಕರು ಮತ್ತು ವಿಮಾನ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರಿದೆ. ಇಂಡಿಗೊ ಮತ್ತು ಏರ್ ಇಂಡಿಯಾ ಸೇರಿದಂತೆ ಪ್ರಮುಖ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ತಮ್ಮ ವಿಮಾನದ ಸ್ಥಿತಿಯ...