ಭಾರತ, ಫೆಬ್ರವರಿ 17 -- Bengaluru Weather: ಬೆಂಗಳೂರು ನಗರದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಬೆಂಗಳೂರಿಗರಿಗೆ ಬೇಸಿಗೆಯ ಸುಡುಬಿಸಿಲಿನ ಅನುಭವ ಈಗಲೇ ಶುರುವಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಈ ವಾರ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಆಸುಪಾಸು ಇರಲಿದ್ದು, ಈ ಸಮಯದ ವಾಡಿಕೆ ತಾಪಮಾನಕ್ಕಿಂತ 1.4 ಡಿಗ್ರಿ ಸೆಲ್ಶಿಯಸ್ ಹೆಚ್ಚಳವನ್ನು ಇದು ತೋರಿಸುತ್ತಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಈ ವಾರ ನಸುಕು ಹಾಗೂ ಮುಂಜಾನೆ ವೇಳೆ ಮಂಜು ಮುಸುಕಿದ ವಾತಾವರಣ ಇರಲಿದೆ. ಹವಾಮಾನ ವೈಪರೀತ್ಯದ ಕಾರಣ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಹವಾಮಾನ ಮುನ್ಸೂಚನೆ ವರದಿಯಲ್ಲಿ ವಿವರಿಸಿದೆ.

ಬೆಂಗಳೂರಿನಲ್ಲಿ ಭಾನುವಾರ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ದ...