ಭಾರತ, ಮಾರ್ಚ್ 26 -- ಬೆಂಗಳೂರು: ರಾಜ್ಯದಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಆದರೆ ಈಗಾಗಲೇ ಇರುವ ಸಂಪರ್ಕ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯವಲ್ಲ ಎಂದು ಇಂಧನ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.

ಮಾರ್ಚ್ 1 ರಿಂದಲೇ ಬೆಸ್ಕಾಂ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡುತ್ತಿದೆ. ಆದರೆ ಇದರ ತಾಂತ್ರಿಕ ನಿರ್ವಹಣಾ ವೆಚ್ಚವನ್ನು ಗ್ರಾಹಕರೇ ಭರಿಸಬೇಕಿದೆ, ಅಂದರೆ ತಾಂತ್ರಿಕ ನಿರ್ವಹಣಾ ವೆಚ್ಚವನ್ನು ಎಲ್ಲಾ ಗ್ರಾಹಕರಿಗೂ ಹಂಚಿಕೆ ಮಾಡಲಾಗುತ್ತದೆ ಎಂದು ಟೈಮ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಕರ್ನಾಟಕದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ಸುಂಕ ಹೆಚ್ಚಳದ ಮೂಲಕ ಪಿಂಚಣಿ ಮತ್ತು ಗ್ರಾಚ್ಯುಟಿ ಪಾವತಿಗಳ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಿದ ಕೆಲವೇ ದಿನಗಳಲ್ಲಿ ಈ ಆದೇಶ ಬಂದಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಎಲ್ಲಾ ಗ್ರಾಹಕರಿಂದ ಸ್ಮಾರ್ಟ್ ಮೀಟರ್ ನಿರ್ವಹಣಾ ವೆಚ್ಚವನ್ನು ವಸೂಲಿ ಮಾಡುವಂತೆ ಬ...