Bengaluru, ಮಾರ್ಚ್ 3 -- Bhargavi LLB Serial: ಕಲರ್ಸ್ ಕನ್ನಡ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ 'ಭಾರ್ಗವಿ LLB' ಅನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಈ ಬಹುನಿರೀಕ್ಷಿತ ಧಾರಾವಾಹಿ ಇಂದಿನಿಂದ (ಮಾರ್ಚ್ 3ರಿಂದ) ಸೋಮವಾರದಿಂದ - ಶುಕ್ರವಾರ ರಾತ್ರಿ 8.30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಈ ಕಥೆ, ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು ಬಲಿಷ್ಠ ವಕೀಲ ಜಯಪ್ರಕಾಶ್ ಪಾಟೀಲ್ ನಡುವಿನ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ಹೇಳುತ್ತದೆ.

ಭಾರ್ಗವಿಯ ತಂದೆ ಓರ್ವ ಲಾಯರ್. ತಂದೆಯನ್ನೇ ಕೋರ್ಟಿನಲ್ಲಿ ಹೀನಾಯವಾಗಿ ಅವಮಾನಿಸಿ ತಲೆ ತಗ್ಗಿಸುವಂತೆ ಮಾಡಿ ವಕೀಲಿಕೆಯನ್ನೇ ತ್ಯಜಿಸುವಂತೆ ಮಾಡಿದವನು ಜೆಪಿ ಪಾಟೀಲ್. ತನ್ನ ವೃತ್ತಿಜೀವನದಲ್ಲಿ ಒಂದೇ ಒಂದು ಸೋಲು ಕಾಣದ, ಗೆಲ್ಲಲು ಯಾವುದೇ ಕಾನೂನನ್ನು ಮುರಿಯುವ ಅವನಿಗೆ ವಕೀಲಿಕೆ ಎಂದರೆ ಅಧಿಕಾರ, ಪ್ರಭಾವ ಮ...