ಭಾರತ, ಮಾರ್ಚ್ 25 -- ರಾಮನಗರ: ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್‌ ಇರುವುದಾಗಿ ಅಪರಿಚಿತರೊಬ್ಬರು ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ, ರೈಲ್ವೆ ಪೊಲೀಸರು ರೈಲು ನಿಲ್ದಾಣದಲ್ಲಿ ಶೋಧ ಕಾರ್ಯ ನಡೆಸಿದರು.

ಆದರೆ ಇದೊಂದು ಹುಸಿ ಬಾಂಬ್ ಕರೆಯಾಗಿದ್ದು, ಒಂದಿಷ್ಟು ಕಾಲ ಆತಂಕಕ್ಕೆ ಕಾರಣವಾಗಿತ್ತು. ಮಧ್ಯರಾತ್ರಿ 12ರ ಸುಮಾರಿಗೆ ರೈಲ್ವೆ ನಿಯಂತ್ರಣ ಕೊಠಡಿಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ರೈಲು ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಹೇಳಿ ಕಾಲ್ ಕಟ್ ಮಾಡಿದ್ದ. ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ರಾತ್ರಿಯೇ ಹುಡುಕಾಟ ನಡೆಸಿದ್ದರು. ಆದರೆ ಆಗ ಏನೂ ಸಿಕ್ಕಿರಲಿಲ್ಲ. ನಂತರ ಬೆಳಿಗ್ಗೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದಳ ರೈಲ್ವೆ ಪೊಲೀಸರು ಸಂಪೂರ್ಣ ನಿಲ್ದಾಣದಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಬಾಂಬ್ ಪತ್ತೆಯಾಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಕಿಡಿಗೇಡಿಯೊಬ್ಬ ಹುಸಿ ಕರೆ ಮಾಡಿ...