Bengaluru, ಮಾರ್ಚ್ 2 -- ಶನಿವಾರ (ಮಾರ್ಚ್‌ 1) ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಿಎಂ ಸಿದ್ಧರಾಮಯ್ಯ ಉದ್ಘಾಟಿಸಿದರು.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದರು.

ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿ...