ಭಾರತ, ಏಪ್ರಿಲ್ 24 -- ಜಗತ್ತನ್ನೇ ಕಾಡಿದ್ದ ಸಾಂಕ್ರಾಮಿಕ ರೋಗ ಕೊರೊನಾ ವೈರಸ್ ಭೀತಿ ಕಡಿಮೆಯಾಗಿದೆ. ಇದೀಗ H5N1 ಎಂದೂ ಕರೆಯಲ್ಪಡುವ ಪಕ್ಷಿ ಜ್ವರದ ಭೀತಿ ಆವರಿಸಿದೆ. ಪ್ರಪಂಚದ ಕೆಲವು ದೇಶಗಳಲ್ಲಿ ಹಕ್ಕಿ ಜ್ವರ ಕಾಣಿಸಿದೆ. ಮಾತ್ರವಲ್ಲ ನಮ್ಮ ನೆರೆ ರಾಜ್ಯ ಕೇರಳದಲ್ಲೂ ಹಕ್ಕಿ ಜ್ವರದ ಭೀತಿ ಆವರಿಸಿದ್ದು, ಗಡಿ ಜಿಲ್ಲೆಗಳಲ್ಲಿ ಎಚ್ಚರ ವಹಿಸಲಾಗಿದೆ.

ಹಸುವಿನ ಹಾಲಿನಲ್ಲಿ ಈ ವೈರಸ್ ಪತ್ತೆಯಾಗಿದ್ದು, ಮೊಟ್ಟೆ, ಹಾಲು, ಕೋಳಿ ಮಾಂಸ ಸೇವಿಸುವ ಮುನ್ನ ಕಾಳಜಿ ವಹಿಸುವುವುದು ಅಗತ್ಯ. ಹಾಲಿನಲ್ಲಿ ಹಕ್ಕಿ ಜ್ವರ ವೈರಸ್ ಪತ್ತೆಯಾಗಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದ್ದು, ಎಚ್ಚರಿಕೆ ನೀಡಿದೆ.

ಈ ವೈರಸ್ ಮೊದಲಿಗೆ 1996ರಲ್ಲಿ ಚೀನಾದಲ್ಲಿ ಪತ್ತೆಯಾಗಿದ್ದು, ನಂತರ ಜಗತ್ತಿನಾದ್ಯಂತ ಹರಡಿತು. ಇತ್ತೀಚಿನ ವರ್ಷಗಳಲ್ಲಿ ಪಕ್ಷಿಗಳು ಮತ್ತು ಸಸ್ತನಿಗಳಲ್ಲಿ ಈ ರೋಗದಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. ಹಕ್ಕಿ ಜ್ವರವು ಸೋಂಕಿತ ಪಕ್ಷಿಗಳು ಅಥವಾ ಅವುಗಳ ಹಿಕ್ಕೆಗಳ ನೇರ ಸಂಪರ್ಕದ ಮೂಲಕ ಹರಡುತ್ತದೆ. ಇಲ್ಲಿಯವರೆಗೆ ಮನುಷ್ಯನಿಂದ ಮನು...