ಭಾರತ, ಫೆಬ್ರವರಿ 27 -- ಬೆಂಗಳೂರು: ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಬಳಿಕ ಕರ್ನಾಟಕದಲ್ಲೂ ಕೋಳಿಗಳಲ್ಲಿ ಹಕ್ಕಿ ಜ್ವರ ಇರುವುದು ಕಂಡು ಬಂದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ನೂರಕ್ಕೂ ಹೆಚ್ಚು ಕೋಳಿಗಳು ಹಕ್ಕಿ ಜ್ವರದಿಂದಲೇ ಮೃತಪಟ್ಟಿರುವುದು ಖಚಿತವಾಗಿದೆ. ಇದಲ್ಲದೇ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲೂ ಕೋಳಿಗಳ ಸಾವಿನ ನಂತರ ಪ್ರಯೋಗಾಲಯ ವರದಿ ನೆಗೆಟಿವ್‌ ಬಂದಿದ್ದರೂ ಪಶುಪಾಲನಾ ಇಲಾಖೆ ಭಾರೀ ಮುನ್ನೆಚ್ಚರಿಕೆ ಕೈಗೊಂಡಿದೆ. ಕರ್ನಾಟಕದ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಕೋಳಿಗಳ ಪರೀಕ್ಷೆ ಸಹಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಪ್ರತಿ ಜಿಲ್ಲೆಯಲ್ಲೂ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ನೇತೃತ್ವದಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ಈ ಸಂಬಂಧ ಪಶುಪಾಲನಾ ಇಲಾಖೆ ಆಯುಕ್ತರಾದ ಶ್ರೀರೂಪಾ ಅವರು ಶುಕ್ರವಾರವೇ ಎಲ್ಲಾ 31 ಜಿಲ್ಲೆಗಳ ಉಪನಿರ್ದೇಶಕರ ಸಭೆಯನ್ನು ಕರೆದಿದ್ದಾರೆ.

ಕರ್ನಾಟಕದಲ್ಲಿ ಸುಮಾರು 18 ವರ್ಷದ ಹಿಂದೆ ಹಕ್ಕಿ ...