Chikkaballapur, ಜನವರಿ 29 -- ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲು ನನಗೆ ಅಧಿಕಾರವಿಲ್ಲ. ಚಿಕ್ಕಬಳ್ಳಾಪುರ ಸಂಸದನಾಗಿ ಬಿಜೆಪಿಯಲ್ಲಿದ್ದುಕೊಂಡು ಒಬ್ಬ ಅಧ್ಯಕ್ಷರನ್ನು ನೇಮಿಸಲು ಆಗುವುದಿಲ್ಲ ಎಂದರೆ ಹೇಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಾವೆಲ್ಲ ಕೆಲಸ ಮಾಡಲು ಅವಕಾಶವನ್ನೇ ನೀಡುತಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂಬ ಉದ್ದೇಶದಿಂದಲೇ ವಿಜಯೇಂದ್ರ ಅವರು ತಮಗೆ ಬೇಕಾದವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಕೋರ್‌ ಕಮಿಟಿಯಲ್ಲಿ ಚರ್ಚಿಸದೇ ಅಧ್ಯಕ್ಷರನ್ನು ನೇಮಿಸಿದ್ದಾರೆ. ಕರೆ ಮಾಡಿದರೆ ಸ್ವೀಕರಿಸುವುದೂ ಇಲ್ಲ. ಅವರ ಅಹಂಕಾರಕ್ಕೆ ನನ್ನ ಧಿಕ್ಕಾರವಿದೆ. ಕೇಂದ್ರದ ನಾಯಕರಿಗೆ ಈಗಾಗಲೇ ದೂರು ಕೂಡ ನೀಡಿದ್ದೇನೆ ಎಂದು ಮಾಜಿ ಸಚಿವ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ.

Published by HT Digital Content Services with permission from HT Kannada....