ಭಾರತ, ಮೇ 24 -- ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿರುವ ನಡುವೆ ಕೋವಿಡ್ ಪಾಸಿಟಿವ್ ಆಗಿದ್ದ ವೃದ್ದರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಮೂಲಕ ಸದ್ಯದ ಸನ್ನಿವೇಶದಲ್ಲಿ ಕೋವಿಡ್ ಪ್ರಕರಣಕ್ಕೆ ಬಲಿಯಾದ ವ್ಯಕ್ತಿ ಬೆಂಗಳೂರಿನ ನಿವಾಸಿಯಾಗಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ಮೂಲದ 85 ವರ್ಷದ ವ್ಯಕ್ತಿ ಉಸಿರಾಟದ ಸಮಸ್ಯೆ, ಇತರೆ ಖಾಯಿಲೆಗಳಿಂದ ಬಳಲುತ್ತಿದ್ದರು. ಅಂಗಾಂಗ ವೈಫಲ್ಯ ಸಮಸ್ಯೆ ಇದ್ದ ವ್ಯಕ್ತಿಯನ್ನು ಖಾಸಗಿ ಆಸ್ಫತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೋವಿಡ್ನಿಂದ ಈ ವ್ಯಕ್ತಿ ಮೃತಪಟ್ಟಿದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. ಕೊಮಾರ್ಬಿಡ್ ಲಕ್ಷಣ ಇದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯ ಇಲಾಖೆಗೂ ಈ ಕುರಿತು ಮಾಹಿತಿ ನೀಡಲಾಗಿತ್ತು. ಈಗ ಆ ವ್ಯಕ್ತಿ ಕೋವಿಡ್ನಿಂದ ಮೃತಪಟ್ಟಿರುವುದು ಖಚಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Published b...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.