ಭಾರತ, ಏಪ್ರಿಲ್ 20 -- ಬೆಂಗಳೂರು: ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿ ನಿವೃತ್ತರಾಗಿದ್ದ ಹಿರಿಯ ಐಪಿಎಸ್‌ ಅಧಿಕಾರಿ ಓಂಪ್ರಕಾಶ್‌ ಅವರನ್ನು ಬೆಂಗಳೂರಿನಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ವಾಸವಿದ್ದ ಓಂಪ್ರಕಾಶ್‌ ಅವರನ್ನು ಭಾನುವಾರ ಮಧ್ಯಾಹ್ನ 4 ಗಂಟೆ ಹೊತ್ತಿಗೆ ಭೀಕರವಾಗಿ ಕೊಲೆ ಮಾಡಲಾಗಿದೆ. ಅವರ ಪತ್ನಿ ಪಲ್ಲವಿ ಓಂಪ್ರಕಾಶ್‌ ಅವರೇ ಕೊಲೆ ಮಾಡಿರುವ ಅನುಮಾನದ ಮೇಲೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಡಿಜಿಪಿ ದರ್ಜೆಯ ಹಿರಿಯ ಐಪಿಎಸ್‌ ಅಧಿಕಾರಿಯೊಬ್ಬರು ಈ ರೀತಿ ಕೊಲೆಯಾಗಿರುವುದು ಇದೇ ಮೊದಲು. ಕೌಟುಂಬಿಕ ಕಾರಣದಿಂದ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು. ಎಲ್ಲಾ ಆಯಾಮದಲ್ಲೂ ತನಿಖೆಯನ್ನು ಆರಂಭಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳೂ ದೌಡಾಯಿಸಿದ್ದಾರೆ.

1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಅವರಿಗೆ 68 ವರ್ಷ ವಯಸ್ಸಾಗಿತ್ತು. ಕರ್ನಾಟಕದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ...