ಭಾರತ, ಏಪ್ರಿಲ್ 20 -- ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ನಿವೃತ್ತರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಓಂಪ್ರಕಾಶ್ ಅವರನ್ನು ಬೆಂಗಳೂರಿನಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ವಾಸವಿದ್ದ ಓಂಪ್ರಕಾಶ್ ಅವರನ್ನು ಭಾನುವಾರ ಮಧ್ಯಾಹ್ನ 4 ಗಂಟೆ ಹೊತ್ತಿಗೆ ಭೀಕರವಾಗಿ ಕೊಲೆ ಮಾಡಲಾಗಿದೆ. ಅವರ ಪತ್ನಿ ಪಲ್ಲವಿ ಓಂಪ್ರಕಾಶ್ ಅವರೇ ಕೊಲೆ ಮಾಡಿರುವ ಅನುಮಾನದ ಮೇಲೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಡಿಜಿಪಿ ದರ್ಜೆಯ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಈ ರೀತಿ ಕೊಲೆಯಾಗಿರುವುದು ಇದೇ ಮೊದಲು. ಕೌಟುಂಬಿಕ ಕಾರಣದಿಂದ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು. ಎಲ್ಲಾ ಆಯಾಮದಲ್ಲೂ ತನಿಖೆಯನ್ನು ಆರಂಭಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳೂ ದೌಡಾಯಿಸಿದ್ದಾರೆ.
1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಅವರಿಗೆ 68 ವರ್ಷ ವಯಸ್ಸಾಗಿತ್ತು. ಕರ್ನಾಟಕದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.