ಭಾರತ, ಏಪ್ರಿಲ್ 29 -- ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿರುವ ಅಲೋಕ್‌ ಮೋಹನ್‌ ಅವರು ಏಪ್ರಿಲ್‌ 30ರ ಬುಧವಾರದಿಂದ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಆದರೆ ಅವರ ಜಾಗಕ್ಕೆ ಹೊಸ ಡಿಜಿಪಿಯನ್ನು ಸದ್ಯಕ್ಕೆ ನೇಮಕ ಮಾಡುವ ಬದಲು ಅವರ ಸೇವೆಯನ್ನೇ ಇನ್ನೂ ಮೂರು ವಾರಕ್ಕೆ ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸಹಿತ ಪ್ರಮುಖರ ಸಮಿತಿಯು ಅಲೋಕ್‌ ಮೋಹನ್‌ ಅವರ ಸೇವಾವಧಿಯನ್ನು ಮುಂದುವರೆಸಲು ನಿರ್ಧರಿಸಿದೆ ಎನ್ನಲಾಗಿದೆ. ಅಲೋಕ್‌ ಮೋಹನ್‌ ಅವರು ಕರ್ನಾಟಕದ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿ ಮೇ 22ಕ್ಕೆ ಎರಡು ವರ್ಷ ತುಂಬಲಿದೆ. ಈ ಕಾರಣದಿಂದಲೇ ಅವರ ಸೇವಾವಧಿ ವಿಸ್ತರಿಸಲಾಗುತ್ತಿದೆ ಎನ್ನಲಾಗಿದೆ.

1987ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಲೋಕ್‌ಮೋಹನ್‌ ಅವರು ಎರಡು ವರ್ಷದ ಹಿಂದೆ ಅಧಿಕಾರ ಸ್ವೀಕರಿಸಿದ್ದರು. ಆಗ ಡಿಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ಕೇಂದ...