Bangalore, ಮೇ 2 -- ಬೆಂಗಳೂರು: ವಿಜಯಪುರ ಜಿಲ್ಲೆಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಪಂಚಮಸಾಲಿ ಸಮುದಾಯದ ಇಬ್ಬರು ಶಾಸಕರ ಪಂಥಾಹ್ವಾನ ಈಗ ರಾಜೀನಾಮೆ ಹಂತಕ್ಕೂ ತಲುಪಿದೆ. ವಿಜಯಪುರ ನಗರದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಸವಾಲನ್ನು ಸ್ವೀಕರಿಸಿರುವ ಸಕ್ಕರೆ, ಎಪಿಎಂಸಿ ಹಾಗೂ ಜವಳಿ ಸಚಿವರಾಗಿರುವ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಶಿವಾನಂದ ಪಾಟೀಲ್ ರಾಜೀನಾಮೆ ಪತ್ರ ಸಲ್ಲಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜೀನಾಮೆ ಸಲ್ಲಿಸಿದರೆ ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಎಂದು ಶಿವಾನಂದ ಪಾಟೀಲ್ ಉಲ್ಲೇಖಿಸಿದ್ದಾರೆ.
ಮೂರು ದಿನದ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶಿವಾನಂದ ಪಾಟೀಲ್ ಅವರ ವಿರುದ್ದ ಟೀಕಾ ಪ್ರಹಾರ ನಡೆಸಿದ್ದರು. ಅವರು ಪಾಟೀಲ್ ಅಲ್ಲ. ಅವರ ಸರ್ ನೇಮ್ ಹಚಡದ್. ಮತಕ್ಕೋಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.