Bangalore, ಜನವರಿ 30 -- ಬೆಂಗಳೂರು: ಕರ್ನಾಟಕದಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈಗಾಗಲೇ ಸುಮಾರು 40 ಸಾವಿರ ಕೋಟಿ ರೂ. ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಮಂಜೂರಾಗಿದೆ. ಅದರಲ್ಲೂ 30 ಸಾವಿರ ಕೋಟಿ ರೂ. ಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಈಗಾಗಲೇ ಕರ್ನಾಟಕದಲ್ಲಿನ ರೈಲ್ವೆ ಸಂಪರ್ಕ ಜಾಲ ವಿಸ್ತರಣೆ, ಮೂಲಸೌಕರ್ಯ ವೃದ್ದಿಯಂತಹ ಚಟುವಟಿಕೆಗಳಿಗೆ ಒತ್ತು ನೀಡಿ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಅವುಗಳಿಗೆ ಮೊದಲ ಆದ್ಯತೆ ನಮ್ಮದು. 2027ರ ಒಳಗೆ ಈಗಾಗಲೇ ಘೋಷಿತ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮುಗಿಸಬೇಕು ಎನ್ನುವ ಸೂಚನೆಗಳನ್ನು ಕರ್ನಾಟಕದ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಸರ್ಕುಲರ್‌ ರೈಲ್ವೆ ಸಹಿತ ಹಲವು ಯೋಜನೆಗಳಿಗೆ ಈ ಬಾರಿಯೂ ಬಜೆಟ್‌ನಲ್ಲಿ ಅನುದಾನ ಸಿಗುವ ನಿರೀಕ್ಷೆಯಿದೆ.

ಇದು ಕೇಂದ್ರ ರೈಲ್ವೆ ರಾಜ್ಯ ಸಚಿವ ಹಾಗೂ ಜಲಶಕ್ತಿ ರಾಜ್ಯ ಸಚಿವರೂ ಆಗಿರುವ ವಿ.ಸೋಮಣ್ಣ ಅವರ ಅಭಿಪ್ರಾಯ. ದಶಕದ ನಂತರ ಕರ್ನಾಟಕದವರಿಗೆ ಕೇಂದ್ರದಲ್ಲಿ ರೈಲ್ವೆ ಖಾತೆ ದೊರೆತಿದೆ. ಈ ಹಿಂದೆ ಬಿಜೆಪಿ ಸರ್ಕಾರ...