Bangalore, ಜನವರಿ 31 -- Budget 2025: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಲಿರುವ ಆಯವ್ಯಯದಲ್ಲಿ ಕರ್ನಾಟಕದ ಬೇಡಿಕೆಗಳೂ ಹಲವು ಇವೆ. ಅದರಲ್ಲಿ ತೆರಿಗೆ, ನೀರಾವರಿ ಯೋಜನೆಗಳು, ಸಾಮಾಜಿಕ ಭದ್ರತೆ ಯೋಜನೆಗಳಡಿ ಪಿಂಚಣಿ ಹೆಚ್ಚಳ, ಮನೆ ಕಟ್ಟುವ ಮೊತ್ತದಲ್ಲಿ ಏರಿಕೆ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದಾರೆ.

ಬೇಡಿಕೆ ಪಟ್ಟಿ ಹೀಗಿದೆ

1. 15ನೇ ಹಣಕಾಸು ಆಯೋಗದ ಅವಧಿ ಮುಂದಿನ ವರ್ಷ ಪೂರ್ಣಗೊಳ್ಳಲಿದ್ದರೂ ಇಲ್ಲಿಯ ವರೆಗೆ ಆಯೋಗವೇ ಶಿಫಾರಸು ಮಾಡಿರುವ ವಿಶೇಷ ಅನುದಾನ ರೂ.5495 ಕೋಟಿ ಮತ್ತು ರಾಜ್ಯ ಕೇಂದ್ರಿತ ರೂ.6000 ಕೋಟಿ ಮೊತ್ತದ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಕೇಂದ್ರ ಹಣಕಾಸು ಆಯೋಗ ತಾನು ಶಿಫಾರಸು ಮಾಡಿದ್ದಕ್ಕಿಂತ ಕಡಿಮೆ ಮೊತ್ತದ ಹಣವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತಾ ಬಂದಿದೆ. 2021-22, 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ 1311 ಕೋಟಿ, ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ರೂ.775 ಕೋಟಿ ...