ಭಾರತ, ಫೆಬ್ರವರಿ 1 -- Union Budget 2025: ಸಂಸತ್ತಿನಲ್ಲಿ ಫೆಬ್ರವರಿ 1 ರ ಶನಿವಾರದಂದು ತನ್ನ 8ನೇ ಕೇಂದ್ರ ಬಜೆಟ್ ಮಂಡಿಸುವ ಮೊದಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಾಡಿಕೆಯಂತೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ದಹಿ- ಚೀನಿ (ಮೊಸರು - ಸಕ್ಕರೆ) ತಿನಿಸಿದರು. ಕೇಂದ್ರ ಬಜೆಟ್ ಮಂಡನೆಗೆ ಮೊದಲು ನಡೆಯುವ ಸಂಪ್ರದಾಯ ಇದಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಶುಭಕೋರಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮೊಸರು ಸಕ್ಕರೆ ತಿನಿಸಿದ ಸಂದರ್ಭದಲ್ಲಿ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಉಪಸ್ಥಿತರಿದ್ದರು. ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪ್ರಸ್ತಾಪ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾಹಿತಿ ನೀಡಿ, ಕೇಂದ್ರ ಬಜೆಟ್ 2025-26 ಮಂಡನೆಗೆ ಅಧಿಕೃತವಾಗಿ ಒಪ...