ಭಾರತ, ಫೆಬ್ರವರಿ 1 -- Budget 2025: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ 1) ಪೂರ್ವಾಹ್ನ 11 ಗಂಟೆಗೆ ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2025 -26 ಅನ್ನು ಮಂಡಿಸಲಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಮಂಡಿಸುತ್ತಿರುವ 8ನೇ ಬಜೆಟ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಸರ್ಕಾರದ ಮೊದಲ ಪೂರ್ಣ ಬಜೆಟ್ ಕೂಡ ಹೌದು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯದೇ ಇದ್ದರೂ, ಎನ್‌ಡಿಎ ಮೈತ್ರಿಗೆ ಬಹುಮತ ಸಿಕ್ಕಿದ್ದು, ಈ ಮೈತ್ರಿ ಸರ್ಕಾರದ ಮೊದಲ ಬಜೆಟ್ 2024ರ ಜುಲೈ 23 ರಂದು ಮಂಡನೆಯಾಗಿತ್ತು. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೊದಲ ಪೂರ್ಣ ಬಜೆಟ್‌ ಇದಾಗಿರುವ ಕಾರಣ ಬಹಳ ಪ್ರಾಮುಖ್ಯತೆ ಇದೆ. ಇದಕ್ಕೆ 5 ಕಾರಣಗಳು-

1) ಬಿಜೆಪಿಗೆ ಬಹುಮತ ಇಲ್ಲದೇ ಮಂಡನೆಯಾಗುತ್ತಿರುವ ಬಜೆಟ್: ಕೇಂದ್ರ ಬಜೆಟ್ 2025 ಎಂಬುದು ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲದೇ ಮಂಡನೆಯಾಗುತ್ತಿರುವ ಮೊದಲ ಪೂರ್ಣ ಬಜೆಟ್. 2024ರ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿಲ...