Bengaluru, ಮಾರ್ಚ್ 21 -- Cauvery Aarati at Sankey Tank: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಇಂದು (ಮಾರ್ಚ್ 21) ಸಂಜೆ ಕಾವೇರಿ ಆರತಿ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸುವುದಕ್ಕೂ ಸಿದ್ಧತೆ ನಡೆದಿದೆ. ಈ ಕಾರ್ಯಕ್ರಮದ ಸಮಯ ಮತ್ತು ಇತರೆ ವಿವರ ಇಲ್ಲಿದೆ. ಕಾವೇರಿ ಆರತಿ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸ್ಯಾಂಕಿ ಕೆರೆ ಸಮೀಪ ವಾಯುವಿಹಾರ ನಿಷೇಧಿಸಲಾಗಿದೆ. ಶುಕ್ರವಾರ ಮುಂಜಾನೆಯಿಂದ ಶನಿವಾರ ಮುಂಜಾನೆವರೆಗೂ ಪ್ರವೇಶ ನಿಷೇಧಿಸಲಾಗಿದೆ. ವಾಕಿಂಗ್, ಜಾಗಿಂಗ್ ಗೆ ಅವಕಾಶ ಇರುವುದಿಲ್ಲ. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜಿಕರಿಗೆ ಅವಕಾಶ ನೀಡಲಾಗಿದೆ. ಕೆರೆಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ ನಿಯಮಗಳನ್ನು ಉಲ್ಲಂಘಿಸದಂತೆ ಸ್ಯಾಂಕಿ ಟ್ಯಾಂಕ್‌ನ ಬಫರ್ ಝೋನ್ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಹೈಕೋರ್ಟ್ ಅನುಮತಿ ನೀಡಿದೆ.

ಸಿದ್ದತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕ...