ಭಾರತ, ಜನವರಿ 30 -- ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್‌ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ಸಿಸಿಎಲ್ 11ನೇ ಸೀಸನ್‌ಗೆ ದಿನಗಣನೆ ಶುರುವಾಗಿದ್ದು, ಇದೇ ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ರಂಗೇರುತ್ತಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ತಂಡದ ಮಾಲೀಕರಾಗಿ ಅಶೋಕ್ ಖೇಣಿ ಸಾಥ್ ಕೊಡುತ್ತಿದ್ದಾರೆ. ಕಳೆದ ಬಾರಿ ರನ್ನರ್ ಅಪ್ ಆಗಿ ಹೊರಗಹೊಮ್ಮಿದ್ದ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಬಾರಿ ಕಪ್ ಗೆಲ್ಲುವ ತವಕದಲ್ಲಿದ್ದಾರೆ. ಈ ಬಾರಿಯ ವಿಶೇಷ ಅಂದ್ರೆ ಕಳೆದ ಬಾರಿ ಮಿಸ್ ಆಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ತಂಡ ಸೇರ್ಪಡೆಯಾಗಿದ್ದಾರೆ. ಸಿಸಿಎಲ್ ಸೀಸನ್ 11ಕ್ಕೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ನಿನ್ನೆ ಸುದ್ದಿ ಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ ಕಿಚ್ಚ ಸುದೀಪ್, ಸಿಸಿಎಲ್ ಆಯೋಜಕರಾದ ವಿಷ್ಣು ಇಂದೋರಿ ಹಾಗೂ ಕರ್ನಾಟಕ ಬುಲ್ಡೋಜರ...