Bangalore, ಏಪ್ರಿಲ್ 6 -- CET Exams 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸಿದ್ದು, ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಏಪ್ರಿಲ್ 18, ಶುಕ್ರವಾರ ಕ್ರಿಶ್ಚಿಯನ್ ಧಾರ್ಮಿಕ ಹಬ್ಬವಾದ ಗುಡ್ ಫ್ರೈಡೇ ಇರುವುದರಿಂದ ಸರ್ಕಾರ ಪರೀಕ್ಷೆ ದಿನಾಂಕವನ್ನು ಬದಲಿಸಿದೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸುವ ಸಿಇಟಿ ಪರೀಕ್ಷೆಗೆ ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನೀರಿಕ್ಷೆಯಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು...