Bangalore, ಮೇ 23 -- ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಳೆದ ತಿಂಗಳಿನಲ್ಲಿ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (CET Result 2025) ಫಲಿತಾಂಶವನ್ನು ಶನಿವಾರ (ಮೇ 24) ಪ್ರಕಟಿಸಲಿದೆ. ಅಂದು ಬೆಳಿಗ್ಗೆ 11.30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಪ್ರಾಧಿಕಾರದ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ಈ ಕೆಳಗಿನ ವೆಬ್ ಸೈಟ್ ನಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಫಲಿತಾಂಶದ ವಿವರಗಳು ಲಭ್ಯವಾಗಲಿವೆ. https://karresults.nic.in ಮೂಲಕವಿವರಗಳನ್ನು ಪಡೆದುಕೊಳ್ಳಬಹುದು ಎಂದು ಪ್ರಾಧಿಕಾರವು ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಎಂಜಿನಿಯರಿಂಗ್ , ಕೃಷಿ, ಫಾರ್ಮಸಿ, ಆಯುಷ್ ಸೇರಿದಂತೆ ವಿವಿಧ ವಿಷಯಗಳ ಟಾಪರ್‌ಗಳು ಹಾಗೂ ಫಲಿತಾಂಶದ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
Published by HT Dig...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.