Bengaluru, ಮಾರ್ಚ್ 30 -- ಜೀವನದಲ್ಲಿ ಎದುರಾಗುವ ಕಠಿಣ ಪರಿಸ್ಥಿತಿಗಳನ್ನು ಎದುರಿಸಿ ಯಶಸ್ಸನ್ನು ಸಾಧಿಸಲು ಚಾಣಕ್ಯರು ಹಲವು ಮಾರ್ಗೋಪಾಯಗಳನ್ನು ನೀಡಿದ್ದಾರೆ. ಚಾಣಕ್ಯ ನೀತಿ ಎಂಬುದು ಉತ್ತಮ ಜೀವನ ನಡೆಸಲು ಇರುವ ಪ್ರಾಯೋಗಿಕ ಮಾರ್ಗದರ್ಶನವನ್ನು ಒದಗಿಸುವ ಸಲಹೆಗಳ ಸಂಗ್ರಹವಾಗಿದೆ. ಜೀವನದಲ್ಲಿ ಕಷ್ಟಪಟ್ಟು ಕೆಲಸ ಮಾಡಿಯೂ ವೈಫಲ್ಯಗಳನ್ನು ಎದುರಿಸುತ್ತಿದ್ದರೆ, ತಕ್ಷಣವೇ ನಿಮ್ಮ ಗುರಿಗಳನ್ನು ಸಾಧಿಸುವತ್ತ ಗಮನಹಿರಿಸುವುದು ಮುಖ್ಯವಾಗಿದೆ ಎಂದು ಚಾಣಕ್ಯರು ಹೇಳುತ್ತಾರೆ. ಅನೇಕ ಜನರಿಗೆ ಅಪೇಕ್ಷಿತ ಯಶಸ್ಸು ಸಿಗುವುದಿಲ್ಲ. ವೈಫಲ್ಯಗಳನ್ನೇ ಹೆಚ್ಚಾಗಿ ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿಯೊಂದು ಪ್ರಯತ್ನವನ್ನು ವಿಫಲವೆಂದು ಪರಿಗಣಿಸಲಾಗುತ್ತದೆ. ಅದಕ್ಕೆ ಆಚಾರ್ಯ ಚಾಣಕ್ಯರು ಕೆಲವು ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಆ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದರಿಂದ ವೈಫಲ್ಯಗಳನ್ನು ಯಶಸ್ಸಿನ ಮೆಟ್ಟಿಲುಗಳನ್ನಾಗಿ ಪರಿವರ್ತಿಸಿಕೊಳ್ಳಬಹುದಾಗಿದೆ.

ಸಿಂಹದಂತೆ ಸಂಪೂರ್ಣ ಶಕ್ತಿ ಬಳಸಿ: ಸಿಂಹವು ತನ್ನ ಗುರಿಯನ್ನ...