ಭಾರತ, ನವೆಂಬರ್ 24 -- ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಗಡಿ ವಿವಾದ ಸಂಬಂಧ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರದ ಮುಖ್ಯಮಂತ್ರಿಯವರು ಸಭೆ ನಡೆಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಗಡಿವಿವಾದ ಪ್ರಕರಣವಿರುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಗ್ಗೆ ಮಾತುಕತೆ ಮೂಲಕವೂ ವಿವಾದ ಬಗೆಹರಿಸಿಕೊಳ್ಳುವ ಚಿಂತನೆಯಿರುವುದಾಗಿ ತಿಳಿಸಿರುವ ಮಾಹಿತಿ ದೊರೆತಿದೆ ಎಂದರು.

ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಅವರು ದಾವೆ ಹೂಡಿದ್ದಾರೆ. ಸರ್ವೋಚ್ಛ ನ್ಯಾಯಾಯಲದಲ್ಲಿ ವಾದ ಮಂಡನೆಯ ನಿರ್ಣಯವನ್ನು ಸರ್ವಪಕ್ಷ ಸಭೆ ಹಾಗೂ ಗಡಿಪ್ರಾಧಿಕಾರದೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಕರ್ನಾಟಕ ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸುವುದಾಗಿ ನಿರ್ಧಾರ ...