ಭಾರತ, ನವೆಂಬರ್ 28 -- ಬೆಂಗಳೂರು: ಆರ್ ಬಿಐ ದೇಶದ ಆರ್ಥಿಕತೆಯ ರಕ್ಷಕನಂತಿದೆ. ಆರ್ ಬಿಐ ತನ್ನದೇ ಇತಿಹಾಸ ಹೊಂದಿದೆ. ಸ್ವತಂತ್ರ ಪೂರ್ವದಿಂದ ಭಾರತದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ, ದೇಶದ ಆರ್ಥಿಕತೆಯನ್ನು ನಿಯಂತ್ರಣ ಮಾಡುತ್ತಿರುವ ಆರ್.ಬಿ.ಐ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದು ಸಂತಸದ ಸಂಗತಿ ಎಂದು ಸಿಎಂ ಬಸವರಾಜ ಬೊಮ್ಮಯಿ ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕಿನ ಪರಿಶಿಷ್ಟ ಜಾತಿ / ಪಂಗಡ ವರ್ಗದ ನೌಕರರ ಸಂಘದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಪ್ರಜಾಪ್ರಭುತ್ವದ ಆತ್ಮ ಇದ್ದಂತೆ. ಸಂವಿಧಾನ ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಬಂದಿದೆ. ಇಷ್ಟು ದೊಡ್ಡ ಜನಸಂಖ್ಯೆ, ವೈವಿಧ್ಯಮಯ ಸಂಸ್ಕೃತಿ, ಭಾಷೆಗಳಿರುವ ದೇಶ ಒಂದು ಸಂವಿಧಾನವನ್ನು ಒಪ್ಪಿ, ಒಂದು ರಾಷ್ಟ್ರ, ಪ್ರಜಾಪ್ರಭುತ್ವ ವಾಗಿ ಗಣತಂತ್ರವಾಗಿ ಒಗ್ಗೂಡಿ ಕೆಲಸ ಮಾಡುತ್ತಿರುವುದು ಇಂದಿನ ಕಾಲದಲ್ಲಿ ಒಂದಿ ಅದ್ಭುತವೇ ಸರಿ ಎಂದರು.

ಆರ್ಥಿಕತೆಗೆ ವೇಗ

ಆರ್ಥಿಕತೆಯಲ್ಲಿ...