ಭಾರತ, ನವೆಂಬರ್ 25 -- ಚಿಕ್ಕಬಳ್ಳಾಪುರ: ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಹೆಚ್‌ಡಿ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಿದ್ದರು. ಆದರೆ ಇದರಿಂದ ಹೆಚ್‌ಡಿಕೆ ಜನಪ್ರಿಯತೆ ಹೆಚ್ಚಲಿದೆ ಎಂದು ಆತಂಕಗೊಂಡ ಸಿದ್ದರಾಮಯ್ಯ, ಷಡ್ಯಂತ್ರ ಮಾಡಿ ಸರ್ಕಾರ ಉರುಳಿಸಿದರು. ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಅವರಿಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರನ್ನು ಖರೀದಿಸುವಂತೆ ಹೇಳಿದ್ದೇ ಸಿದ್ದರಾಮಯ್ಯ ಎಂದು ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದರು.

ಹೆಚ್‌ಡಿ ಕುಮಾರಸ್ವಾಮಿ ಅವರು ತಮ್ಮನ್ನು ಮುಖ್ಯಮಂತ್ರಿ ಮಾಡುವಂತೆ ಯಾರ ಮನೆಯ ಬಾಗಲಿಗೂ ಹೋಗಿ ನಿಲ್ಲಲಿಲ್ಲ. ...