ಭಾರತ, ಫೆಬ್ರವರಿ 24 -- ನಮ್ಮ ಮಣ್ಣಿನ ಹೆಮ್ಮೆಯ ಚಿತ್ರ ಎಂದು ಕನ್ನಡ ಚಿತ್ರರಸಿಕರು ಹೆಮ್ಮೆಯಿಂದ ಬೀಗಬಹುದಾದ ಚಿತ್ರ ಕ್ಷೇತ್ರಪತಿ ಸಿನಿಮಾ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಗಂಭೀರ ಮತ್ತು ಜನಪರ ಅಂಶಗಳನ್ನು ಮನರಂಜನಾತ್ಮಕವಾಗಿ ಬೆರೆಸಿ ಈ ಸಿನಿಮಾ ಜನರ ಮನ ಗೆದ್ದಿದೆ. ಇದು ನಟ ನವೀನ್ ಶಂಕರ್‍‌ ಅಭಿನಯದ ಸಿನಿಮಾ ಆಗಿದ್ದು,ಕೆ ಜಿ ಎಫ್ ಖ್ಯಾತಿಯ ಅರ್ಚನಾ ಜೋಯಿಸ್, ಅಚ್ಯುತ್ ಕುಮಾರ್ ತಾರಾಗಣದಲ್ಲಿದ್ದಾರೆ. ಈ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಕ್ಷೇತ್ರಪತಿ ಸಿನಿಮಾ ಬುಧವಾರ (26 ಫೆಬ್ರವರಿ) ಶಿವರಾತ್ರಿಯಂದು ಮಧ್ಯಾಹ್ನ ಎರಡು ಗಂಟೆಗೆ ಪ್ರಸಾರವಾಗಲಿದ್ದು, ಚಿತ್ರ ರಸಿಕರು ನೋಡಿ ಆನಂದಿಸಬಹುದಾದ ಸಿನಿಮಾ ಆಗಿದೆ. ಶ್ರೀಕಾಂತ ಕಟಗಿ ನಿರ್ದೇಶನದ ಕ್ಷೇತ್ರಪತಿ ರೈತರ ಸಮಸ್ಯೆಗಳ ಬಗ್ಗೆ ಸಮಾಜದ ಗಮನ ಸೆಳೆದ ಸಿನಿಮಾ.ರೈತ ಪರ ಸಿನಿಮಾ ಎಂದು ವಿಮರ್ಶಕರಿಂದ ಮನ್ನಣೆ ಪಡೆದ, ಈ ಚಿತ್ರ ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ.

"ರೈತ ನಮ್ಮ ದೇಶದ ಬೆನ್ನೆಲುಬು, ಲಿವರ್, ಕಿಡ್ನಿ, ಜಠರ ಎ...